PM Kisan New Update :: ಈ ಕೆಲಸ ಮಾಡದಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ನಿಧಿ ಹಣ ಬರಲ್ಲ! ಇಲಾಖೆಯಿಂದ ಹೊಸ ಅಪ್ಡೇಟ್!
ಸರ್ಕಾರದ ಕಡೆಯಿಂದ ರೈತರಿಗೆ ಹಲವಾರು ಯೋಜನೆಗಳು ಜಾರಿಗೆ ಬಂದಿದ್ದು ಅದರಲ್ಲಿ ಪ್ರಮುಖವಾಗಿ ಪಿ ಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆ
ಈ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕವಾಗಿ 6,000ಗಳನ್ನು 3 ಕಂತುಗಳಾಗಿ ಕೇಂದ್ರ ಸರ್ಕಾರದಿಂದ ಕೊಡಲಾಗುತ್ತಿದೆ.
ಈ ಯೋಜನೆ ಅಡಿಯಲ್ಲಿ ನೊಂದಣಿ ಮಾಡಿಕೊಂಡಿರುವ ರೈತರಿಗೆ ಸರ್ಕಾರದ ಕಡೆಯಿಂದ ಒಂದು ಅಪ್ಡೇಟ್ ಇದು ಅದರ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ
ಆದ್ದರಿಂದ ಪಿ ಎಮ್ ಕಿಸಾನ್ ಸಮ್ಮಾನ್ ನಿಧಿಯಲ್ಲಿ ಯೋಜನೆ ಅಡಿಯಲ್ಲಿ ರಿಜಿಸ್ಟ್ರೇಷನ್ ಮಾಡಿಸಿಕೊಂಡಿರುವ ರೈತರು ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ಈ ಅಪ್ಡೇಟ್ ಅನ್ನು ನೀಡಿದ್ದು, ಪಿ.ಎಂ.ಕಿಸಾನ್ ಯೋಜನೆಯಡಿ
ನೊಂದಣಿ ಮಾಡಿಸಿಕೊಂಡಿರುವ ರೈತರು ಆರ್ಥಿಕ ನೆರವು ಪಡೆಯಲು e-KYC ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ ಎಂದು ಇಲಾಖೆಯ ವೆಬ್ಸೈಟ್ ನಲ್ಲಿ ಮಾಹಿತಿಯನ್ನು ನೀಡಿದೆ.
ಹಾಗಾಗಿ ಇದುವರೆಗೂ ಯಾರು e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ ತಮ್ಮ ಹತ್ತಿರದ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರ / ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ e-KYC ಮಾಡಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ.
ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ರೈತ ಕರೆ ಕೇಂದ್ರ (1800-425-3553) ವನ್ನು ಸಂಪರ್ಕಿಸಲು ಇಲಾಖೆ ತಿಳಿಸಿದೆ.
ಇ-ಕೆವೈಸಿ ಮಾಡಿರುವ ಬಗ್ಗೆ ಮಾಹಿತಿ ಪಡೆಯುವುದು ಹೇಗೆ?
ನೀವು ಈಗಾಗಲೇ ಇ-ಕೆವೈಸಿ ಮಾಡಿಸಿಕೊಂಡಿರುವಿರೋ ಇಲ್ಲವೋ ಎಂಬುದನ್ನು ನಿಮ್ಮ ಮೊಬೈಲ್ ನಲ್ಲಿಯೇ ಪರಿಶೀಲಿಸಬಹುದಾಗಿದ್ದು, ಅದಕ್ಕಾಗಿ ನೀವು ಮೊದಲು ಈ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
*ನಂತರ ಕೆಳಗಡೆ ಇರುವ ಫಾಮ೯ರ್ಸ್ ಕಾಲಂ ನಲ್ಲಿ ಇ-ಕೆವೈಸಿ ಎಂಬ ಆಯ್ಕೆಯಿದ್ದು, ಅದರ ಮೇಲೆ ಕ್ಲಿಕ್ ಮಾಡಿ
*ಅಲ್ಲಿ ನಿಮ್ಮ ಆಧಾರ ಕಾಡ್೯ ನಂಬರ್ ಹಾಕಿ ಸಚ್೯ ಬಟನ್ ಮೇಲೆ ಕ್ಲಿಕ್ ಮಾಡಿ
ಆಗ ನಿಮಗೆ ನಿಮ್ಮ ಇ-ಕೆವೈಸಿ ಆಗಿದೆಯೋ ಇಲ್ಲವೋ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.
ಧನ್ಯವಾದಗಳು
< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >
1) ಫೇಸ್ಬುಕ್ / Facebook – ಜೈನ್ ಆಗಿ/ join facebook
2)ವಾಟ್ಸಾಪ್ ಗ್ರೂಪ್ /Whatsapp ಗುಂಪು – ಜೈನ್ ಆಗಿ/ whatsapp ಗೆ ಸೇರಿಕೊಳ್ಳಿ
3) ” ಟ್ವಿಟರ್ /ಟ್ವಿಟರ್ – ಸೇರು/ಜೈನ್
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
V.K
ಪರಿಸರ ಪರಿಸರದೊಂದಿಗೆ ಆರ್ಥಿಕತೆ