Flood Relief Fund:: ತೋಟಗಾರಿಕಾ ಬೆಳೆಗಳಿಗೆ 37300/- ಬೆಳೆ ಹಾನಿ ಪರಿಹಾರ ಮೊತ್ತ ಜಮೆ! ದಕ್ಷಿಣ ಕನ್ನಡ ಜಿಲ್ಲೆಗೆ 349 ಕೋಟಿ ಪರಿಹಾರ!
2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ತುಂಬಾ ಖುಷಿಯಲ್ಲಿದ್ದರೂ ಆದರೆ ವರುಣ ಮತ್ತೆ ಅವಕೃಪೆ ನೀಡಿದ್ದು,
ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದ್ದ ಕಾರಣ ರಾಜ್ಯದ ನಾನಾ ಕಡೆ ನೆರೆಹಾವಳಿ ಉಂಟಾಗಿ ಎಪ್ಪತ್ತು ಸಾವಿರ ಹೆಕ್ಟರ್ ನಷ್ಟು ಜಮೀನಿನಲ್ಲಿ ಬೆಳೆ ಹಾನಿ ಉಂಟಾಗಿದೆ.
ದಕ್ಷಿಣ ಕನ್ನಡಕ್ಕೆ 349 ಕೋಟಿ ಪರಿಹಾರ!
ಈಗಾಗಲೇ ರಾಜ್ಯ ಸರ್ಕಾರವು ಬೆಳೆ ಹಾನಿ ಪರಿಹಾರ ಮೊತ್ತವನ್ನು ಆಯಾ ಜಿಲ್ಲೆಗಳಿಗೆ ಒದಗಿಸಿದ್ದು, ಬೆಳೆ ಹಾನಿಗೊಳಗಾದ ರೈತರ ಖಾತೆಗಳಿಗೆ ಜಮೆಗೊಳಿಸಲಾಗುತ್ತಿದೆ.
ಇದರಲ್ಲಿ ಅತಿ ಹೆಚ್ಚು ಬೆಳೆ ಹಾನಿ ಅನುಭವಿಸಿದ ಜಿಲ್ಲೆ ಎಂದರೆ ಅದು ದಕ್ಷಿಣ ಕನ್ನಡ ಜಿಲ್ಲೆಯಾಗಿದ್ದು, ಈ ಜಿಲ್ಲೆಗೆ ತೋಟಗಾರಿಕಾ ಬೆಳೆಗಳು ಹಾನಿಗೊಳಗಾದ ಕಾರಣ 349 ಕೋಟಿ ರೂಪಾಯಿಗಳ ಬೆಳೆ ಹಾನಿ ಪರಿಹಾರ ಒದಗಿಸಲಾಗಿದೆ.
ಯೋಜನೆಯ ಲಾಭ ಪಡೆದುಕೊಳ್ಳುತ್ತಿರುವ ರಾಜ್ಯದ ನಂಬರ್ 1 ಜಿಲ್ಲೆ!
ತೋಟಗಾರಿಕಾ ಬೆಳೆಗಳಿಗೆ ಪ್ರಸ್ತುತ 37,300 ರೂ ಗಳಂತೆ ಪರಿಹಾರ ಮೊತ್ತವನ್ನು ಕೊಡಲಾಗುತ್ತಿದ್ದು, ತೋಟಗಾರಿಕಾ ಬೆಳೆಗಳಿಗೆ ಅತಿ ಹೆಚ್ಚು ಪರಿಹಾರ ಮೊತ್ತ ಪಡೆದ ರಾಜ್ಯದ ನಂಬರ್ 1 ಜಿಲ್ಲೆಯಾಗಿ ದಕ್ಷಿಣ ಕನ್ನಡ ಹೊರಹೊಮ್ಮಿದೆ.
ಜಿಲ್ಲೆಯಲ್ಲಿ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು ವರ್ಷದಿಂದ ವರ್ಷಕ್ಕೆ ಯೋಜನೆಯ ಲಾಭ ಪಡೆಯುತ್ತಿರುವ ರೈತರ ಸಂಖ್ಯೆ ಹೆಚ್ಚಾಗುತ್ತಿದೆ.
2022-23ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳು ಈ ಕೆಳಗಿನಂತೆ ಬೆಳೆ ವಿಮೆ ಯೋಜನೆಯ ಪರಿಹಾರ ಮೊತ್ತವನ್ನು ಪಡೆದುಕೊಂಡಿವೆ.
ಸುಳ್ಯ ತಾಲ್ಲೂಕು – 90.34 ಕೋ. ರೂ.
ಪುತ್ತೂರು -85.58 ಕೋ. ರೂ.
ಕಡಬ-65.97 ಕೋ. ರೂ,
ಬೆಳ್ತಂಗಡಿ -50.57 ಕೋ. ರೂ.
ಬಂಟ್ವಾಳ- 49.28 ಕೋ. ರೂ
ಕೆಲವು ಕಾರಣಗಳಿಂದ ಇನ್ನು ಸು. 500 ಅರ್ಜಿಗಳ ವಿಲೇವಾರಿ ಬಾಕಿ ಇದ್ದು,ಆಧಾರ್ ಜೋಡಣೆ ಸರಿಯಾಗದಿರುವುದು,
ಬೆಳೆ ಸಮೀಕ್ಷೆ ಹೊಂದಾಣಿಕೆ ಆಗದಿರುವುದು ಮುಂತಾದ ಕಾರಣಗಳಿಂದ ವಿಮೆ ಮೊತ್ತ ಬಿಡುಗಡೆ ಬಾಕಿ ಇದ್ದು,
ರೈತರು ಆಗಿರುವ ಸಮಸ್ಯೆಗೆ ಸರಿಯಾದ ಕಾರಣ ಹಾಗೂ ದಾಖಲೆ ಒದಗಿಸಿದಲ್ಲಿ ಕೂಡಲೇ ಈ ಅಜಿ೯ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.
ನೀವು ಕೂಡ ಬೆಳೆ ಹಾನಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಕೂಡಲೇ ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ನಿಮ್ಮ ಆರ್ ಜೆ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.
ಬೆಳೆವಿಮೆ ಪರಿಹಾರ ಬಂದಿರುವ ಬಗ್ಗೆ ಮಾಹಿತಿ ಚೆಕ್ ಮಾಡುವುದು ಹೇಗೆ?
ನೀವು ಮೊದಲಿಗೆ ಸಂರಕ್ಷಣೆ ಎಂಬ ವೆಬ್ಸೈಟಿಗೆ ಭೇಟಿ ನೀಡಬೇಕು ಅದಕ್ಕಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.samrakshane.karnataka.gov.in/
*ನಂತರ ಅಲ್ಲಿ ವರ್ಷ ಹಾಗೂ ಋತು ಸೆಲೆಕ್ಟ್ ಮಾಡಿ ಗೋ(Go) ಬಟನ್ ಕ್ಲಿಕ್ ಮಾಡಿ
*ನಂತರ ಓಪನ್ ಆಗುವ ಪೇಜ್ ನಲ್ಲಿ ಚಿತ್ರದಲ್ಲಿ ತೋರಿಸಿರುವಂತೆ ಫಾಮ೯ರ್ಸ್ ಆಯ್ಕೆಯಲ್ಲಿರುವ ಚೆಕ್ ಸ್ಟೇಟಸ್ (check status) ಎಂಬ ಆಪ್ಷನ್ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ 2
*ನಂತರ ಓಪನ್ ಆಗೋ ಪೇಜ್ ನಲ್ಲಿ ನಿಮ್ಮ ವಿಮೆ ಪಾವತಿಸಿದ ಅರ್ಜಿಯ ಸಂಖ್ಯೆ ಇದ್ದರೆ ಅದನ್ನು ಅಥವಾ ನಿಮ್ಮ ಆಧಾರ್ ಕಾರ್ಡ್ ನಂಬರ್ ಅಥವಾ ಮೊಬೈಲ್ ನಂಬರ್ ಹಾಕಿ ಹಾಗೂ ಕೊಟ್ಟಿರುವ ಕ್ಯಾಪ್ಟಾ ಎಂಟರ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ
*ಆಗ ನಿಮಗೆ ನಿಮ್ಮ ಅರ್ಜಿಯ ಬಗ್ಗೆ ಮಾಹಿತಿ ಸಿಗುತ್ತದೆ. ಅದರಲ್ಲಿ ನಿಮ್ಮ ಅರ್ಜಿ ಸ್ವೀಕೃತವಾಗಿದ್ದರೆ ಕಂಪನಿಯಿಂದ ಅರ್ಜಿ ಸ್ವೀಕರಿಸಲಾಗಿದೆ ಎಂದು ತೋರಿಸಿರುತ್ತಾರೆ.
ನಿಮ್ಮ ಹೆಸರಿನ ಮುಂದಿನ ಕೊನೆಯ ಕಾಲಂ ನಲ್ಲಿ ಸೆಲೆಕ್ಟ್ ಎಂಬ ಆಯ್ಕೆ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ ಆಗ ಇನ್ನಷ್ಟು ವಿವರ ತೋರಿಸುತ್ತದೆ.
*ಆಗ ಓಪನ್ ಆಗುವ ಪೇಜ್ ನಲ್ಲಿ ವೀವ್ ಡಿಟೇಲ್ಸ್ ಎಂದಿದ್ದು, ಅದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿಯ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿ ಸಿಗುತ್ತದೆ.
*ಅದರಲ್ಲಿ ಯಾವ ಸರ್ವೆ ನಂಬರ್ ಗೆ ವಿಮೆ ಕಟ್ಟಿದ್ದೀರಿ, ಯಾವ ಬೆಳೆ ಎಷ್ಟು ವಿಮೆ ಕಟ್ಟಿದ್ದೀರಿ ಎಂಬೆಲ್ಲಾ ಮಾಹಿತಿ ತೋರಿಸುತ್ತದೆ.
ಹೀಗೆ ನೀವು ನಿಮ್ಮ ಬೆಳೆ ಹಾನಿ ಪರಿಹಾರ(crop insurance) ಅರ್ಜಿಯ ಸ್ಥಿತಿ ಏನು? ಇನ್ನೂ ಯಾವಾಗ ಪರಿಹಾರ ಸಿಗುತ್ತದೆ ಎಂಬುದನ್ನು ಮೊಬೈಲ್ ನಲ್ಲಿಯೇ ಪರಿಶೀಲಿಸಬಹುದು.
ಧನ್ಯವಾದಗಳು
< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >
1) ಫೇಸ್ಬುಕ್ / Facebook – ಜೈನ್ ಆಗಿ/ join facebook
2)ವಾಟ್ಸಾಪ್ ಗ್ರೂಪ್ /Whatsapp ಗುಂಪು – ಜೈನ್ ಆಗಿ/ whatsapp ಗೆ ಸೇರಿಕೊಳ್ಳಿ
3) ” ಟ್ವಿಟರ್ /ಟ್ವಿಟರ್ – ಸೇರು/ಜೈನ್
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
V.K
ಪರಿಸರ ಪರಿಸರದೊಂದಿಗೆ ಆರ್ಥಿಕತೆ