Crop Insurance schemes extended::ಹೊಸ ವಷ೯ಕ್ಕೆ ರೈತರಿಗೆ ಕೇಂದ್ರ ಸಕಾ೯ರದಿಂದ 6,475 ಕೋಟಿ ರೂ. ಗಳ ಭಜ೯ರಿ ಕೊಡುಗೆ! ರಸಗೊಬ್ಬರ ಪ್ಯಾಕೇಜ್, ಬೆಳೆ ವಿಮೆ ಮತ್ತೇ 1 ವಷ೯ ವಿಸ್ತರಣೆ!
ಕೇಂದ್ರ ಸರ್ಕಾರವು ಹೊಸ ವರ್ಷಕ್ಕೆ ದೇಶದ ರೈತರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ದೇಶದಲ್ಲಿ ಜಾರಿ ಇರುವ ಎರಡು ಕೃಷಿ ವಿಮೆ ಯೋಜನೆಗಳ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿದೆ.
ಇದರ ಜೊತೆಗೆ ಸಬ್ಸಿಡಿ ದರದಲ್ಲಿ ಡಿಎಪಿ ಗೊಬ್ಬರ ವಿತರಿಸುವ ಯೋಜನೆಯನ್ನು ಕೂಡ ಮತ್ತೇ ಒಂದು ವರ್ಷ ವಿಸ್ತರಿಸಿ ದೇಶದ ಬೆನ್ನೆಲುಬಾಗಿರುವ ರೈತರಿಗೆ ಕೇಂದ್ರ ಸರ್ಕಾರ ಬೆನ್ನೆಲುಬಾಗಿ ನಿಂತಿದೆ.
ಸಚಿವ ಸಂಪುಟದಲ್ಲಿ ಮಹತ್ವದ ತೀಮಾ೯ನ!
ಕಳೆದ ಎರಡು ಮೂರು ವರ್ಷಗಳಿಂದ ಸತತವಾಗಿ ಬರಗಾಲ ಹಾಗೂ ನೆರೆಹಾವಳಿಯಿಂದ ತತ್ತರಿಸಿರುವ ರೈತರಿಗೆ ಬೆಳೆ ವಿಮೆ ಯೋಜನೆಗಳ ವಿಸ್ತರಣೆ ಮಾಡುವುದು ಅಗತ್ಯವಾಗಿದೆ ಎಂಬುದನ್ನು ಅರಿತ ಕೇಂದ್ರ ಸರ್ಕಾರ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ರೈತ ಪರ ನಿರ್ಣಯಗಳನ್ನು ತೆಗೆದುಕೊಂಡಿದೆ.
ರಸಗೊಬ್ಬರ ಸಬ್ಸಿಡಿ ವಿಶೇಷ ಪ್ಯಾಕೇಜ್ ವಿಸ್ತರಣೆ!
ಈ ನಿಣ೯ಯಗಳ ಪೈಕಿ ಪ್ರಮುಖವಾಗಿ ಡಿಎಪಿ ರಸಗೊಬ್ಬರ ಖರೀದಿಗೆ ಎನ್ಬಿಎಸ್ ಸಬ್ಸಿಡಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ವಿಶೇಷ ಪ್ಯಾಕೇಜ್ ಅನ್ನು ಇದೇ ಜ.1.ರಿಂದ ಮುಂದಿನ ಆದೇಶದವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.
ರೈತರಿಗೆ ಅವಶ್ಯವಿರುವ ಗೊಬ್ಬರವನ್ನು ಸಬ್ಸಿಡಿ ದರದಲ್ಲಿ ನೀಡುವುದು ರೈತರಿಗೆ ಸಾಕಷ್ಟು ಅನುಕೂಲ ಮಾಡಿಕೊಡುವುದರಿಂದ ಮೆಟ್ರಿಕ್ ಟನ್ ಡಿಎಪಿಯ ವಿಶೇಷ ಪ್ಯಾಕೇಜ್ ಅನ್ನು ಎನ್ಬಿಎಸ್ ಸಬ್ಸಿಡಿಯಾದ 3,500 ರೂ.ಗೂ
ಆಚೆಗೆ ವಿಸ್ತರಿಸುವ ಬಗ್ಗೆ ರಸಗೊಬ್ಬರಗಳ ಸಚಿವಾಲಯ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸನ್ನು ಇದೀಗ ಸಂಪುಟ ಸಭೆ ಅನುಮೋದಿಸಿದೆ.
ರೈತರಿಗೆ 6475 ಕೋಟಿ ರೂ. ಗಳ ಭಜ೯ರಿ ಕೊಡುಗೆ!
ಈ ಸಬ್ಸಿಡಿ ವಿಸ್ತರಣೆ ಮಾಡುವುದರಿಂದ ಕೇಂದ್ರ ಸರ್ಕಾರಕ್ಕೆ 3,850 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ.
ಈ ಯೋಜನೆಯಲ್ಲಿ ಕಳೆದ ವರ್ಷದ ಏಪ್ರಿಲ್ನಿಂದ ಇದುವರೆಗೆ ವಿಶೇಷ ಪ್ಯಾಕೇಜ್ ಗೆ ಅನುಮೋದಿಸಿದ ಒಟ್ಟು ಮೊತ್ತ 6,475 ಕೋಟಿ ರೂ. ಆಗಲಿದೆ ಎಂದು ಕೇಂದ್ರ ಸಕಾ೯ರದ ಮೂಲಗಳು ತಿಳಿಸಿವೆ.
ಮತ್ತೋ ಎರಡು ಬೆಳೆ ವಿಮೆಗಳ ಅವಧಿ ವಿಸ್ತರಿಸಿದ ಕೇಂದ್ರ!
ರಾಸಾಯನಿಕ ಗೊಬ್ಬರದ ಸಬ್ಸಿಡಿ ಪ್ಯಾಕೇಜ್ ವಿಸ್ತರಣೆಯೊಂದಿಗೆ ದೇಶದಲ್ಲಿ ಜಾರಿಯಲ್ಲಿರುವ ಎರಡು ಬೆಳೆ ವಿಮೆಗಳಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪುನರ್ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2025 ಹಾಗೂ 26ರವರೆಗೆ ಮುಂದುವರೆಸಲು ಕೇಂದ್ರ ಸಕಾ೯ರವು ತೀಮಾ೯ನಿಸಿದ್ದು, ಇದರಿಂದ ಪದೇ ಪದೇ ಬೆಳೆ ವಿಮೆ ಅನುಭವಿಸುತ್ತಿರುವ ರೈತರಿಗೆ ಸಂತಸ ತಂದಿದೆ.
ಕಳೆದ 3-4 ವಷ೯ಗಳಿಂದ ಸತತವಾಗಿ ದೇಶದಲ್ಲಿ ಒಂದಲ್ಲಾ ಒಂದು ಕಡೆ ಬರಗಾಲ, ನೆರೆ ಹಾವಳಿ ಉಂಟಾಗುತ್ತಿದ್ದು, ಇದರಿಂದಾಗಿ ರೈತರಿಗೆ ಪ್ರತಿ ವಷ೯ ಅಂದುಕೊಂಡಂತೆ ಫಸಲು ಕೈಗೆ ಸಿಗುತ್ತಿಲ್ಲ.
ಪದೇ ಪದೇ ಬೆಳೆಹಾನಿಗೆ ಸಿಲುಕುತ್ತಿರುವ ರೈತರಿಗೆ ಬೆಳೆ ವಿಮೆ ಯೋಜನೆಗಳು ವರದಾನವಾಗಿವೆ. ಹಾಗಾಗಿ ಯೋಜನೆಗಳ ಅವಧಿ ವಿಸ್ತರಣೆಯಿಂದ ರೈತರು ಬೆಳೆಹಾನಿಗೆ ಸಿಲುಕಿದರೂ ಕೂಡ ಆಥಿ೯ಕ ನಷ್ಟವನ್ನು ತಡೆಯಲು ವಿಮೆ ಸ್ವಲ್ಪ ಮಟ್ಟಿಗೆ ಸಹಕಾರಿಯಾಗಲಿದೆ.
ಬೆಳೆ ಹಾನಿ ಪರಿಹಾರ (crop insurance) ಅರ್ಜಿ ಸ್ಥಿತಿ ಪರಿಶೀಲಿಸುವುದು ಹೇಗೆ?
Step 1: ನೀವು ಮೊದಲಿಗೆ ಸಂರಕ್ಷಣೆ ಎಂಬ ವೆಬ್ಸೈಟಿಗೆ ಭೇಟಿ ನೀಡಬೇಕು ಅದಕ್ಕಾಗಿ ಈ ಕೆಳಗಿನ ಲಿಂಕ್(link) ಮೇಲೆ ಕ್ಲಿಕ್ ಮಾಡಿ
https://www.samrakshane.karnataka.gov.in/
Step 2: ನಂತರ ಅಲ್ಲಿ ವರ್ಷ ಹಾಗೂ ಋತು ಸೆಲೆಕ್ಟ್ ಮಾಡಿ ಗೋ(Go) ಬಟನ್ ಕ್ಲಿಕ್ ಮಾಡಿ
Step 3: ನಂತರ ಓಪನ್ ಆಗುವ ಪೇಜ್ ನಲ್ಲಿ ಚಿತ್ರದಲ್ಲಿ ತೋರಿಸಿರುವಂತೆ ಫಾಮ೯ರ್ಸ್(Farmers) ಆಯ್ಕೆಯಲ್ಲಿರುವ ಚೆಕ್ ಸ್ಟೇಟಸ್ (check status) ಎಂಬ ಆಪ್ಷನ್ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ
*ನಂತರ ಓಪನ್ ಆಗೋ ಪೇಜ್ ನಲ್ಲಿ ನಿಮ್ಮ ವಿಮೆ ಪಾವತಿಸಿದ ಅರ್ಜಿಯ ಸಂಖ್ಯೆ ಇದ್ದರೆ ಅದನ್ನು ಅಥವಾ ನಿಮ್ಮ ಆಧಾರ್ ಕಾರ್ಡ್ ನಂಬರ್ ಅಥವಾ ಮೊಬೈಲ್ ನಂಬರ್ ಹಾಕಿ ಹಾಗೂ ಕೊಟ್ಟಿರುವ ಕ್ಯಾಪ್ಚಾ ಎಂಟರ್ ಮಾಡಿ ಸರ್ಚ್ ಬಟನ್(Search) ಮೇಲೆ ಕ್ಲಿಕ್ ಮಾಡಿ
*ಆಗ ನಿಮಗೆ ನಿಮ್ಮ ಅರ್ಜಿಯ ಬಗ್ಗೆ ಮಾಹಿತಿ ಸಿಗುತ್ತದೆ. ಅದರಲ್ಲಿ ನಿಮ್ಮ ಅರ್ಜಿ ಸ್ವೀಕೃತವಾಗಿದ್ದರೆ ಕಂಪನಿಯಿಂದ ಅರ್ಜಿ ಸ್ವೀಕರಿಸಲಾಗಿದೆ ಎಂದು ತೋರಿಸಿರುತ್ತಾರೆ. ನಿಮ್ಮ ಹೆಸರಿನ ಮುಂದಿನ ಕೊನೆಯ ಕಾಲಂ ನಲ್ಲಿ ಸೆಲೆಕ್ಟ್ ಎಂಬ ಆಯ್ಕೆ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ ಆಗ ಇನ್ನಷ್ಟು ವಿವರ ತೋರಿಸುತ್ತದೆ.
*ಆಗ ಓಪನ್ ಆಗುವ ಪೇಜ್ ನಲ್ಲಿ ವೀವ್ ಡಿಟೇಲ್ಸ್(View details) ಎಂದಿದ್ದು, ಅದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿಯ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿ ಸಿಗುತ್ತದೆ.
*ಅದರಲ್ಲಿ ಯಾವ ಸರ್ವೆ ನಂಬರ್ ಗೆ ವಿಮೆ ಕಟ್ಟಿದ್ದೀರಿ, ಯಾವ ಬೆಳೆ ಎಷ್ಟು ವಿಮೆ ಕಟ್ಟಿದ್ದೀರಿ ಎಂಬೆಲ್ಲಾ ಮಾಹಿತಿ ತೋರಿಸುತ್ತದೆ.
ಹೀಗೆ ನೀವು ನಿಮ್ಮ ಬೆಳೆ ಹಾನಿ ಪರಿಹಾರ(crop insurance) ಅರ್ಜಿಯ ಸ್ಥಿತಿ ಏನು? ಇನ್ನೂ ಯಾವಾಗ ಪರಿಹಾರ ಸಿಗುತ್ತದೆ ಎಂಬುದನ್ನು ಮೊಬೈಲ್ ನಲ್ಲಿಯೇ ಪರಿಶೀಲಿಸಬಹುದು.
ಧನ್ಯವಾದಗಳು
< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >
1) ಫೇಸ್ಬುಕ್ / Facebook – ಜೈನ್ ಆಗಿ/ join facebook
2)ವಾಟ್ಸಾಪ್ ಗ್ರೂಪ್ /Whatsapp ಗುಂಪು – ಜೈನ್ ಆಗಿ/ whatsapp ಗೆ ಸೇರಿಕೊಳ್ಳಿ
3) ” ಟ್ವಿಟರ್ /ಟ್ವಿಟರ್ – ಸೇರು/ಜೈನ್
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
V.K
ಪರಿಸರ ಪರಿಸರದೊಂದಿಗೆ ಆರ್ಥಿಕತೆ