PM Kisan Update :: 19 ನೇ ಕಂತಿನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ 4000/- ಜಮೆ!! 6 ಲಕ್ಷ ರೈತರು ಯೋಜನೆಯಿಂದ ಹೊರಗುಳಿದಿದ್ದಾರೆ!!
ಇತ್ತೀಚಿಗೆ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ರೈತ ಸಂಘವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರೋತ್ಸಾಹ ಧನವನ್ನು 12,000/- ಗಳಿಗೆ ಏರಿಸುವಂತೆ ಮನವಿ ಮಾಡಿಕೊಂಡಿದ್ದು ಸರ್ಕಾರ ಪಿಎಂ ಕಿಸಾನ್ 19ನೇ ಕಂತಿನಲ್ಲಿಯೇ 4000 ರೂ. ಗಳನ್ನು ಕೊಡಲಾಗುವುದು ಎಂದು ಸುದ್ದಿಗಳು ಹರಿದಾಡುತ್ತಿದ್ದು, ಇದೀಗ ಈ ಬಗ್ಗೆ ಕೇಂದ್ರ ಕೃಷಿ ಸಚಿವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸಕಾ೯ರದ ಕೃಷಿ ಸಚಿವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ ಪ್ರೋತ್ಸಾಹ ಧನವನ್ನು 8000 ಅಥವಾ 12,000/- ಗಳಿಗೆ ಏರಿಸುವ ಬಗ್ಗೆ ಮನವಿ ಬಂದಿದ್ದು, ಆದರೆ ಸದ್ಯಕ್ಕೆ ಇಂತಹ ಯಾವುದೇ ಯೋಚನೆಗಳು ಸರ್ಕಾರದ ಬಳಿ ಇಲ್ಲ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.
ಅಲ್ಲದೇ 13 ಮತ್ತು 14 ನೇ ಕಂತಿನಲ್ಲಿ ಸುಮಾರು 49.5 ಲಕ್ಷ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದರು. ಆದರೆ 15 ನೇ ಕಂತಿನಿಂದ ಈ ಯೋಜನೆಯ ಲಾಭ ಪಡೆಯುತ್ತಿರುವವರ ಸಂಖ್ಯೆ ಇಳಿಕೆಯಾಗುತ್ತಿದ್ದು, ಪ್ರಸ್ತುತ ಸುಮಾರು 43 ಲಕ್ಷ ರೈತರು ಯೋಜನೆಯ ಫಲಾನುಭವಿಗಳಾಗಿದ್ದಾರೆ.
ಕಳೆದ ಒಂದುವರೆ ವಷ೯ದಲ್ಲಿ ಸುಮಾರು 6 ಲಕ್ಷ ರೈತರು ಯೋಜನೆಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈಗಾಗಲೇ 19ನೇ ಕಂತಿನ ಪ್ರೋತ್ಸಾಹಧನವನ್ನು ಪಡೆಯಲು ಅಹ೯ರಾಗಿರುವ ರೈತರ ಲಿಸ್ಟನ್ನು ಸಂಬಂಧಪಟ್ಟ ವೆಬ್ಸೈಟ್ನಲ್ಲಿ ಹಾಕಲಾಗಿದ್ದು ನೀವು ಕೂಡ ನಿಮ್ಮ ಹೆಸರು ಇದೆಯೇ ಎಂದು ಚೆಕ್ ಮಾಡಿಕೊಳ್ಳಬಹುದು.
ಮುಖ್ಯವಾಗಿ ಈ ಲಿಸ್ಟ್ ನಲ್ಲಿ ಇ-ಕೆವೈಸಿ ಆಗಿರುವ ರೈತರಿಗೆ ಮಾತ್ರ ಹಣ ಜಮೆಯಾಗಲಿದ್ದು, ರೈತರು ತಮ್ಮ ತಮ್ಮ ಇ-ಕೆವೈಸಿ ಆಗಿದೆಯೋ ಆಗಿಲ್ಲವೋ ಎಂದು ಕೂಡಲೇ ಮಾಡಿಸಿಕೊಳ್ಳಿ.
ಇ-ಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ?
step 1: ಅದಕ್ಕಾಗಿ ನೀವು ಮೊದಲು ಈ ಕೆಳಗಿನ ಲಿಂಕ್(link) ಮೇಲೆ ಕ್ಲಿಕ್ ಮಾಡಿ
https://pmkisan.gov.in/aadharekyc.aspx
step 2: ನಂತರ ಓಪನ್(open) ಆಗುವ ಪೇಟ್ನಲ್ಲಿ ಆಧಾರ್(Aadhar) ನಂಬರ್ ಹಾಕಿ ಸರ್ಚ್ (search) ಬಟನ್ ಮೇಲೆ ಕ್ಲಿಕ್(click) ಮಾಡಿ
step 3: ಆಗ ಮೊಬೈಲ್ ಗೆ ಓಟಿಪಿ(otp) ಬರುತ್ತದೆ ಅದನ್ನು ಎಂಟರ್(enter) ಮಾಡಿ ಸಬಿಟ್(submit) ಮಾಡಿದರೆ ನಿಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿ E KY ಆಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ.
ಇನ್ನು 2024-25 ನೇ ಸಾಲಿನ ಮುಂಗಾರು ಹಂಗಾಮಿನ ನೆರೆಹಾವಳಿಯಿಂದಾದ ಬೆಳೆ ಹಾನಿ ಪರಿಹಾರ 156.14 ಕೋಟಿ ರೂ. ಯನ್ನು ಈಗಾಗಲೇ ಸಕಾ೯ರ ಬೆಳೆಹಾನಿಗೊಳಗಾದ ರೈತರಿಗೆ ನೀಡಲಾಗುತ್ತಿದೆ. ಅಡಿಕೆ, ಮಾವು,ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು.
ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ದಿನಾಂಕ 16-12-2024 ರಂದು ವಿಮೆ ಜಮೆಯಾಗಲಿದೆ. ಉಳಿದಂತೆ ಮಾವು, ಶುಂಠಿ ಹಾಗೂ ಮೆಣಸು ವಿಮೆ ಪಾವತಿಸಿದ 2226 ರೈತರಿಗೆ ಡಿಸೆಂಬರ್ 2 ರಂದು ವಿಮೆಯ ಹಣ ಜಮೆಯಾಗಿದೆ.
ಹಾವೇರಿ ಜಿಲ್ಲೆಯಲ್ಲಿ 15000 ರೈತರಿಗೆ 7.5 ಕೋಟಿ ರೂಪಾಯಿ ವಿಮೆ ಪರಿಹಾರ ಜಮೆಯಾಗಿದೆ. ಹೀಗೆ ಎಲ್ಲಾ ಜಿಲ್ಲೆಯ ರೈತರಿಗೂ ಕೂಡ ಈ ಬಾರಿ ಹೆಚ್ಚಿನ ಪರಿಹಾರ ಸಿಕ್ಕಿದೆ.
ಬೆಳೆ ಪರಿಹಾರ (crop insurance) ಅರ್ಜಿ ಸ್ಥಿತಿ ಪರಿಶೀಲಿಸುವುದು ಹೇಗೆ?
Step 1: ನೀವು ಮೊದಲಿಗೆ ಸಂರಕ್ಷಣೆ ಎಂಬ ವೆಬ್ಸೈಟಿಗೆ ಭೇಟಿ ನೀಡಬೇಕು ಅದಕ್ಕಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.samrakshane.karnataka.gov.in/
Step 2: ನಂತರ ಅಲ್ಲಿ ವರ್ಷ ಹಾಗೂ ಋತು ಸೆಲೆಕ್ಟ್ ಮಾಡಿ ಗೋ(Go) ಬಟನ್ ಕ್ಲಿಕ್ ಮಾಡಿ
Step 3: ನಂತರ ಓಪನ್ ಆಗುವ ಪೇಜ್ ನಲ್ಲಿ ಚಿತ್ರದಲ್ಲಿ ತೋರಿಸಿರುವಂತೆ ಫಾಮ೯ರ್ಸ್ ಆಯ್ಕೆಯಲ್ಲಿರುವ ಚೆಕ್ ಸ್ಟೇಟಸ್ (check status) ಎಂಬ ಆಪ್ಷನ್ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ 2
Step 4: ನಂತರ ಓಪನ್ ಆಗೋ ಪೇಜ್ ನಲ್ಲಿ ನಿಮ್ಮ ವಿಮೆ ಪಾವತಿಸಿದ ಅರ್ಜಿಯ ಸಂಖ್ಯೆ ಇದ್ದರೆ ಅದನ್ನು ಅಥವಾ ನಿಮ್ಮ ಆಧಾರ್ ಕಾರ್ಡ್ ನಂಬರ್ ಅಥವಾ ಮೊಬೈಲ್ ನಂಬರ್ ಹಾಕಿ ಹಾಗೂ ಕೊಟ್ಟಿರುವ ಕ್ಯಾಪ್ಟಾ ಎಂಟರ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ
Step 5: ಆಗ ನಿಮಗೆ ನಿಮ್ಮ ಅರ್ಜಿಯ ಬಗ್ಗೆ ಮಾಹಿತಿ ಸಿಗುತ್ತದೆ. ಅದರಲ್ಲಿ ನಿಮ್ಮ ಅರ್ಜಿ ಸ್ವೀಕೃತವಾಗಿದ್ದರೆ ಕಂಪನಿಯಿಂದ ಅರ್ಜಿ ಸ್ವೀಕರಿಸಲಾಗಿದೆ ಎಂದು ತೋರಿಸಿರುತ್ತಾರೆ. ನಿಮ್ಮ ಹೆಸರಿನ ಮುಂದಿನ ಕೊನೆಯ ಕಾಲಂ ನಲ್ಲಿ ಸೆಲೆಕ್ಟ್ ಎಂಬ ಆಯ್ಕೆ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ ಆಗ ಇನ್ನಷ್ಟು ವಿವರ ತೋರಿಸುತ್ತದೆ.
Step 6: ಆಗ ಓಪನ್ ಆಗುವ ಪೇಜ್ ನಲ್ಲಿ ವೀವ್ ಡಿಟೇಲ್ಸ್ ಎಂದಿದ್ದು, ಅದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿಯ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿ ಸಿಗುತ್ತದೆ.
Step 7: ಅದರಲ್ಲಿ ಯಾವ ಸರ್ವೆ ನಂಬರ್ ಗೆ ವಿಮೆ ಕಟ್ಟಿದ್ದೀರಿ, ಯಾವ ಬೆಳೆ ಎಷ್ಟು ವಿಮೆ ಕಟ್ಟಿದ್ದೀರಿ ಎಂಬೆಲ್ಲಾ ಮಾಹಿತಿ ತೋರಿಸುತ್ತದೆ.
ಹೀಗೆ ನೀವು ನಿಮ್ಮ ಬೆಳೆ ಹಾನಿ ಪರಿಹಾರ(crop insurance) ಅರ್ಜಿಯ ಸ್ಥಿತಿ ಏನು? ಇನ್ನೂ ಯಾವಾಗ ಪರಿಹಾರ ಸಿಗುತ್ತದೆ ಎಂಬುದನ್ನು ಮೊಬೈಲ್ ನಲ್ಲಿಯೇ ಪರಿಶೀಲಿಸಬಹುದು.
ಧನ್ಯವಾದಗಳು
< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >
1) ಫೇಸ್ಬುಕ್ / Facebook – ಜೈನ್ ಆಗಿ/ join facebook
2)ವಾಟ್ಸಾಪ್ ಗ್ರೂಪ್ /Whatsapp ಗುಂಪು – ಜೈನ್ ಆಗಿ/ whatsapp ಗೆ ಸೇರಿಕೊಳ್ಳಿ
3) ” ಟ್ವಿಟರ್ /ಟ್ವಿಟರ್ – ಸೇರು/ಜೈನ್
ಮಾರುಕಟ್ಟೆ ದರವನ್ನು ದಿನನಿತ್ಯ ತಿಳಿದುಕೊಳ್ಳಲು….
ಇತರ ಜಿಲ್ಲೆಗಳ ಕೊಬ್ಬ ರಿ ಮಾರುಕಟ್ಟೆಯ ದರವು ನಿಮಗೆ ಬೆಳೆದ ಫಸಲಿಗೆ ಒಳ್ಳೆ ದರವು ದೊರೆತಂತಾಗುತ್ತದೆ. ಈ ಕಾರಣಕ್ಕಾಗಿ ರೈತರಿಗೆ ಸಹಾಯವಾಗಲು ನಮ್ಮ ವೆಬ್‌ಸೈಟ್‌ನಲ್ಲಿ ಇರುವ ದಿನಾಂಕಗಳಲ್ಲಿ ಇಂದಿನ ಮಾರುಕ ಟ್ಟೆ ದರವನ್ನು ಪ್ರಕಟಿಸಲಾಗುತ್ತದೆ.
<<< ಅಡಿಕೆ ಮಾರುಕಟ್ಟೆ : ಇಂದಿನ ಅಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ )>>>
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
ವಿ.ಕೆ
ಪರಿಸರ ಪರಿಸರದೊಂದಿಗೆ ಆರ್ಥಿಕತೆ