Crop insurance status: ಬೆಳೆ ವಿಮೆ ಪರಿಹಾರ ಬರುತ್ತಾ? ಅಜಿ೯ ಹಾಕಿದ ನಂತರ ಮುಂದೇನು?
ರಾಜ್ಯದಲ್ಲಿ ಪ್ರಕೃತಿ ವಿಕೋಪಗಳಿಂದ ಇತ್ತೀಚಿಗೆ ರೈತರಿಗೆ ಬೆಳೆ ಹಾನಿ ಆಗುತ್ತಿರುವುದು ಹೆಚ್ಚಾಗುತ್ತಿದ್ದು ಇದರಿಂದ ರೈತರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾರೆ
ಇಂತಹ ಪರಿಸ್ಥಿತಿಗಳಲ್ಲಿ ಅವರಿಗೆ ಸಹಾಯಕವಾಗಿ ನಿಲ್ಲುವುದು ಬೆಳೆ ವಿಮೆಗಳು(crop insurance). ರೈತರು ಮಾಡಿಸುವ ಬೆಳೆ ವಿಮೆಗಳು ಬೆಳೆ ಹಾನಿಯಾದ ಸಂದರ್ಭದಲ್ಲಿ ರೈತರಿಗೆ ಬೆನ್ನೆಲುಬಾಗಿ ನಿಲ್ಲುತ್ತವೆ
ಆದರೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ರೈತರಿಗೆ ಹಲವಾರು ಗೊಂದಲಗಳಿರುತ್ತವೆ ಏಕೆಂದರೆ ಬೆಳೆ ಪರಿಹಾರ ಬರುತ್ತದೆಯೋ ಇಲ್ಲವೋ,
ಅವರು ಹಾಕಿರುವ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋಸರ್ಕಾರದಿಂದ ಪರಿಹಾರ ಬರುವುದು ತಿಂಗಳು ಅಥವಾ ವರ್ಷಗಳಾಗಬಹುದೇ ಎಂಬ ಹಲವಾರು ಗೊಂದಲಗಳಲ್ಲಿ ಒದ್ದಾಡುತ್ತಿರುತ್ತಾರೆ.
ಇಂತಹ ಗೊಂದಲಗಳಿಗೆ ಈ ಲೇಖನದಲ್ಲಿ ನಿಮಗೆ ಮಾಹಿತಿ ಸಿಗುತ್ತದೆ. ಲೇಖನವನ್ನು ಸಂಪೂರ್ಣವಾಗಿ ಓದಿ.
ರೈತರು ಬೆಳೆ ಹಾನಿಯಾದ 72 ಗಂಟೆಗಳೊಳಗೆ ಬೆಳೆಹಾನಿ ಪರಿಹಾರ(crop insurance) ಅಜಿ೯ಯನ್ನು ಸಲ್ಲಿಸಬೇಕು. ಹೀಗೆ ಸಲ್ಲಿಸಿದ ಅಜಿ೯ಯ ಸ್ಥಿತಿ ಏನು ಎಂಬುದರ ಬಗ್ಗೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಯೋಣ.
ಬೆಳೆ ಪರಿಹಾರ (crop insurance) ಅಜಿ೯ ಸ್ಥಿತಿ ಪರಿಶೀಲಿಸುವುದು ಹೇಗೆ?
* ನೀವು ಮೊದಲಿಗೆ ಸಂರಕ್ಷಣೆ ಎಂಬ ವೆಬ್ಸೈಟಿಗೆ ಭೇಟಿ ನೀಡಬೇಕು ಅದಕ್ಕಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.samrakshane.karnataka.gov.in/
*ನಂತರ ಅಲ್ಲಿ ವಷ೯ ಹಾಗೂ ಋತು ಸೆಲೆಕ್ಟ್ ಮಾಡಿ ಗೋ(Go) ಬಟನ್ ಕ್ಲಿಕ್ ಮಾಡಿ
Click on go
* ಓಪನ್ ಆಗುವ ಪೇಜ್ ನಲ್ಲಿ ಚಿತ್ರದಲ್ಲಿ ತೋರಿಸುವಂತೆ ಚೆಕ್ ಸ್ಟೇಟಸ್ (check status) ಎಂಬ ಆಪ್ಷನ್ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ
Click on check status
*ನಂತರ ಓಪನ್ ಆಗೋ ಪೇಜ್ ನಲ್ಲಿ ನಿಮ್ಮ ವಿಮೆ ಪಾವತಿಸಿದ ಅರ್ಜಿಯ ಸಂಖ್ಯೆ ಇದ್ದರೆ ಅದನ್ನು ಅಥವಾ ನಿಮ್ಮ ಆಧಾರ್ ಕಾರ್ಡ್
ನಂಬರ್ ಅಥವಾ ಮೊಬೈಲ್ ನಂಬರ್ ಹಾಕಿ ಹಾಗೂ ಕೊಟ್ಟಿರುವ ಕ್ಯಾಪ್ಚಾ ಎಂಟರ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ
Click on arrow marked
*ಆಗ ನಿಮಗೆ ನಿಮ್ಮ ಅಜಿ೯ಯ ಬಗ್ಗೆ ಮಾಹಿತಿ ಸಿಗುತ್ತದೆ. ಅದರಲ್ಲಿ ನಿಮ್ಮ ಅಜಿ೯ ಸ್ವೀಕೃತವಾಗಿದ್ದರೆ ಕಂಪನಿಯಿಂದ ಅಜಿ೯ ಸ್ವೀಕರಿಸಲಾಗಿದೆ ಎಂದು ತೋರಿಸಿರುತ್ತಾರೆ.
ನಿಮ್ಮ ಹೆಸರಿನ ಮುಂದಿನ ಕೊನೆಯ ಕಾಲಂ ನಲ್ಲಿ ಸೆಲೆಕ್ಟ್ ಎಂಬ ಆಯ್ಕೆ ಇದ್ದು, ಅದರ ಮೇಲೆ ಕ್ಲಿಕ್ ಮಾಡಿ ಆಗ ಇನ್ನಷ್ಟು ವಿವರ ತೋರಿಸುತ್ತದೆ.
Click on select as per arrow
*ಆಗ ಓಪನ್ ಆಗುವ ಪೇಜ್ ನಲ್ಲಿ ವ್ಹೀವ್ ಡಿಟೇಲ್ಸ್ ಎಂದಿದ್ದು, ಅದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅಜಿ೯ಯ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿ ಸಿಗುತ್ತದೆ.
Click on view details
*ಅದರಲ್ಲಿ ಯಾವ ಸವೆ೯ ನಂಬರ್ ಗೆ ವಿಮೆ ಕಟ್ಟಿದ್ದೀರಿ, ಯಾವ ಬೆಳೆ ಎಷ್ಟು ವಿಮೆ ಕಟ್ಟಿದ್ದೀರಿ ಎಂಬೆಲ್ಲಾ ಮಾಹಿತಿ ತೋರಿಸುತ್ತದೆ.
Full applicant details
ಹೀಗೆ ನೀವು ನಿಮ್ಮ ಬೆಳೆ ಹಾನಿ ಪರಿಹಾರ(crop insurance) ಅಜಿ೯ಯ ಸ್ಥಿತಿ ಏನು?
ಇನ್ನೂ ಯಾವಾಗ ಪರಿಹಾರ ಸಿಗುತ್ತದೆ ಎಂಬುದನ್ನು ಕಛೇರಿಗಳಿಗೆ ಅಲೆದಾಡದೇ ಮನೆಯಲ್ಲಿಯೇ ಕುಳಿತು ಪರಿಶೀಲಿಸಬಹುದು.
ಧನ್ಯವಾದಗಳು
< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >
1) ಫೇಸ್ಬುಕ್ / Facebook – ಜೈನ್ ಆಗಿ/ join facebook
2)ವಾಟ್ಸಾಪ್ ಗ್ರೂಪ್ /Whatsapp ಗುಂಪು – ಜೈನ್ ಆಗಿ/ whatsapp ಗೆ ಸೇರಿಕೊಳ್ಳಿ
3) ” ಟ್ವಿಟರ್ /ಟ್ವಿಟರ್ – ಸೇರು/ಜೈನ್
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
V.K
ಪರಿಸರ ಪರಿಸರದೊಂದಿಗೆ ಆರ್ಥಿಕತೆ